ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರನ್ನು ಬಂಧಿಸಲಾಗಿದೆ. ಕೊಲೆ ಕೇಸ್ನಲ್ಲಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಬಲವಾದ ಸಾಕ್ಷಿ ಸಿಕ್ಕಂತಾಗಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಅನೇಕ ಮಾಹಿತಿಯನ್ನು ಕಲೆ ಹಾಕಿದ್ದಾರೆ.
ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡವಾಗಿದೆ ಎನ್ನಲಾಗಿದೆ.
ಎಫ್‌ಎಸ್‌ಎಲ್ ಪರಿಶೀಲನೆ ವೇಳೆ ದರ್ಶನ್ ಅವರ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾ ಸ್ವಾಮಿಯ ದೇಹದ ರಕ್ತ ಎಂಬುದು ವರದಿಯಲ್ಲಿ ಖಚಿತವಾಗಿದೆ. ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವುದಕ್ಕೆ ಇದು ಅತ್ಯಂತ ಮಹತ್ವಪೂರ್ಣ ಸಾಕ್ಷ್ಯ ಆಗುತ್ತಿದೆ. ಎಫ್‌ಎಸ್‌ಎಲ್ ತಂಡದವರು ಜಪ್ತಿ ಮಾಡಿದ್ದ ಇನ್ನೂ ಹಲವು ವಸ್ತುಗಳ ವರದಿ ಬರುವುದು ಬಾಕಿ ಇದೆ.