ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರವು ಗ್ಯಾರಂಟಿಗಳ ಹೆಸರಿನಲ್ಲಿ ಮಹಿಳೆಯರಿಗೆ ಶಕ್ತಿ ಯೋಜನೆ ನೀಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದೆ. ಆದರೆ ಮಹಿಳೆಯರ ಉಚಿತ ಪ್ರಯಾಣದ ಹಣವನ್ನು ಮನೆಯ ಪುರುಷರಿಂದ ಪಡೆದುಕೊಳ್ಳುವ ಹುನ್ನಾರ ನಡೆಸಿ, ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ದರ ಏರಿಕೆ ಮಾಡಿ ಸಚಿವ ಸಂಪುಟದಲ್ಲಿ ಆದೇಶಿಸಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆದು ಯಥಾಸ್ಥಿತಿ ಮುಂದುವರಿಸಬೇಕೆAದು ಜೆಡಿಎಸ್ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಅಲಿ ಎಚ್.ಕೊಪ್ಪಳ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ರಾಜ್ಯದ ಜನತೆ ಈಗಾಗಲೇ ನಿರುದ್ಯೋಗ ಸಮಸ್ಯೆ ಮತ್ತು ಬಡತನದಿಂದ ರೋಸಿ ಹೋಗಿದ್ದಾರೆ. ಮೇಲಾಗಿ ಸಾರಿಗೆ ಬಸ್ಸುಗಳಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕೂಡ ಸರಿಯಾಗಿ ದೊರೆಯುತ್ತಿಲ್ಲ. ಎಷ್ಟೋ ದೂರ ನಿಂತುಕೊAಡು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ದರ ಏಕೆಯಿಂದ ಹಳ್ಳಿ ಮತ್ತು ಪಟ್ಟಣಗಳಿಗೆ ವ್ಯಾಪಾರಕ್ಕೆಂದು ದಿನನಿತ್ಯ ಅಲೆಯುವ ಜನರಿಗೆ ಹೊರೆಯಾಗಿ ಪರಿಣಮಿಸುತ್ತದೆ. ಕಾರಣ, ಸರಕಾರ ಕೂಲಿ ಕಾರ್ಮಿಕರ, ಬಡ ವ್ಯಾಪಾರಿಗಳ ಕಷ್ಟವನ್ನು ಅರಿತು ಸಾರಿಗೆ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆAದು ಹೇಳಿದ್ದಾರೆ.