ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಹರಪನಹಳ್ಳಿ ವಕೀಲರ ಸಂಘದ ಪದಾಧಿಕಾರಿಗಳು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ನೂತನವಾಗಿ ನಿರ್ಮಾಣವಾಗಿರುವ ಕೋರ್ಟ್ಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹಾಗೂ ಇನ್ನಿತರ ಬೇಡಿಕೆ ಈಡೇರಿಸಲು ಮನವಿ ಸಲ್ಲಿಸಿದರು.
Advertisement
ವಕೀಲರ ಸಂಘದ ಅಧ್ಯಕ್ಷ ಕೆ.ರಾಮನಗೌಡ್ರು, ಉಪಾಧ್ಯಕ್ಷ ಪೀರ್ ಆಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಪುರಸಭಾ ಸದಸ್ಯರು ಹಾಗೂ ವಕೀಲರಾದ ಡಿ.ಅಬ್ದುಲ್ ರೆಹಮಾನ್, ಟಿ.ವೆಂಕಟೇಶ್, ಲಾಟಿ ದಾದಾಪೀರ್, ವಕೀಲರಾದ ಜಗದೀಶ್, ಕೇಶವ್, ಪ್ರಭಾಕರ ಎಸ್.ಪಿ, ಮೀನಾಕ್ಷಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.