ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಚಿಕಿತ್ಸೆಗೆ ಅನುಕೂಲ ಕಲ್ಪಿಸಲು ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಮನವಿ ಮಾಡಿದ್ದಾರೆ.
ಗದಗ-ಬೆಟಗೇರಿ ನಗರದ ಹಾಗೂ ಸುತ್ತಲೂ ಇರುವ ಗ್ರಾಮದ ಮಹಿಳೆಯರಿಗೆ ಹೆರಿಗೆ ಹಾಗೂ ಮಕ್ಕಳ ಚಿಕಿತ್ಸೆಗಾಗಿ ಈ ಆಸ್ಪತ್ರೆ ಅನುಕೂಲಕರವಾಗಿದೆ. ಇಲ್ಲಿ ಪೂರ್ಣ ಪ್ರಮಾಣದ ಚಿಕಿತ್ಸೆಗೆ ವ್ಯವಸ್ಥೆಗೆ ಅನುಕೂಲ ಮಾಡಿಕೊಡಬೇಕಿದೆ. ಪಾರ್ಕಿಂಗ್ ವ್ಯವಸ್ಥೆ, ವೈದ್ಯರು ಹಾಗೂ ಸಿಬ್ಬಂದಿಗಳಿಗೆ ವಸತಿ ಸೌಕರ್ಯವೂ ಇಲ್ಲಿದೆ. ಚಿಕಿತ್ಸೆ ಇತ್ಯಾದಿ ವಿಚಾರಗಳಲ್ಲಿ ಇನ್ನಷ್ಟು ಅನುಕೂಲ ಕಲ್ಪಿಸಿಕೊಡಲು ಸಂಬಂಧಿಸಿದ ಜಿಲ್ಲಾ ಆಡಳಿತ ಗಮನ ಹರಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿದ್ದಾರೆ.



