ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ದಿನಾಂಕವನ್ನು ನಿಗದಿ ಮಾಡುವಂತೆ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ (ರಾಜು) ಕುರಡಗಿ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
Advertisement
ಮನವಿ ಸಲ್ಲಿಸಿ ಮಾತನಾಡಿದ ರಾಜು ಕುರಡಗಿ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ಸಮ್ಮತಿ ನೀಡಿದೆ. ಆದಷ್ಟು ಬೇಗ ದಿನಾಂಕವನ್ನು ನಿಗದಿಪಡಿಸಿ ಚುನಾವಣೆ ನಡೆಸಿ ಗದಗ-ಬೆಟಗೇರಿ ಅವಳಿ ನಗರದ ಮೂಲಭೂತ ಸೌಕರ್ಯಗಳನ್ನು ಸಕಾಲಕ್ಕೆ ಒದಗಿಸಲು ಅನುವು ಮಾಡಿಕೊಡಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ವಿನಾಯಕ ಮಾನ್ವಿ, ರಾಘು ಯಳವತ್ತಿ, ಪ್ರಕಾಶ ಅಂಗಡಿ, ಮುತ್ತಣ್ಣ ಮುಶಿಗೇರಿ, ನಾಗರಾಜ ತಳವಾರ, ಮಹೇಶ ದಾಸರ, ಉಷಾ ದಾಸರ, ವಿದ್ಯಾವತಿ ಗಡಗಿ, ಲಕ್ಷ್ಮೀ ಕಾಕಿ, ವಿಜಯಲಕ್ಷ್ಮೀ ದಿಂಡೂರ, ಶಶಿಧರ ದಿಂಡೂರ, ಮಹಾಂತೇಶ ನೆಲವಡಿ ಉಪಸ್ಥಿತರಿದ್ದರು.