ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಲ್ಲೆಯ ಬಿ.ಪಿ.ಎಲ್ ಕುಟುಂಬಗಳು ತಮ್ಮ ಆಹಾರ ಧಾನ್ಯ ಪಡೆದುಕೊಳ್ಳಲು ಅಂಡಿಗಳಿಗೆ ಹೋದಾಗ ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ತಂದು ಕೊಟ್ಟಾಗ ಮಾತ್ರ ಆಹಾರ ಧಾನ್ಯವನ್ನು ನೀಡುತ್ತೇವೆ ಎಂದು ಬಡ ಜನರಿಗೆ ಅಂಗಡಿಕಾರರು ಎಚ್ಚರಿಕೆ ನೀಡುತ್ತಿದ್ದಾರೆ. ಸರ್ಕಾರದ ಯಾವುದೇ ನಿರ್ದೇಶನ ಇಲ್ಲದೇ ಹಾಗೂ ಆಹಾರ ಇಲಾಖೆಯಿಂದ ಯಾವುದೇ ಸೂಚನೆ ಇಲ್ಲದೇ ಅಂಗಡಿಕಾರರು ಬಿಪಿಎಲ್ ಕುಟುಂಬಗಳಿಗೆ ಆಹಾರ ನೀಡಲು ನಿರಾಕರಿಸುತ್ತಿರುವುದ್ದರಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆತಂಕ ಸೃಷ್ಟಿಯಾಗಿದೆ. ಜಾತಿ ಮತ್ತು ಆದಾಯ ಕಡ್ಡಾಯ ಮಾಡದೇ ಆಹಾರ ಧಾನ್ಯವನ್ನು ವಿತರಣೆ ಮಾಡಲು ಸೂಚಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಸ್ಲಂ ಸಮಿತಿಯ ನೇತೃತ್ವದಲ್ಲಿ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ನೀಡಿ ಒತ್ತಾಯಿಸಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಬಿಪಿಎಲ್ ಕುಟುಂಬಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕೇಳುತ್ತಿರುವುದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ದಾರಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯಗೊಳಿಸಬಾರದು ಎಂದರು.
ಗದಗ ಜಿಲ್ಲಾ ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೆಹರುನಿಸಾ ಡಂಬಳ, ಮೈಮುನ ಬೈರಕದಾರ, ಮೌಲಾಸಾಬ ಗಚ್ಚಿ, ಬಾಷಾಸಾಬ ಡಂಬಳ, ದುರ್ಗಪ್ಪ ಮಣ್ಣವಡ್ಡರ, ಪ್ರೇಮಾ ಮಣವಡ್ಡರ, ಸುಶೀಲಮ್ಮ ಗೊಂದಾರ, ಮೆಹಬೂಬಸಾಬ ಬಳ್ಳಾರಿ, ಸಾಕ್ರುಬಾಯಿ ಗೋಸಾವಿ, ಖಾಜೇಸಾಬ ಇಸ್ಮಾಯಿಲನವರ, ಮಕ್ತುಮಸಾಬ ಮುಲ್ಲಾನವರ, ಈರಮ್ಮ ಬೇವಿನಮರದ, ನಾಗರಾಜ ಮಣವಡ್ಡರ, ದಾದು ಗೋಸಾವಿ, ಖಾಜೇಸಾಬ ಬಳ್ಳಾರಿ, ಮಲೇಶಪ್ಪ ಕಲಾಲ, ಚಂದ್ರಪ್ಪ ಲಕ್ಕುಂಡಿ, ಶರಣಪ್ಪ ಬಿಂಗದಕಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸ್ಥಳೀಯ ನಿವಾಸ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಸತಿ ಯೋಜನೆ ಇನ್ನು ಹಲವಾರು ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿ ಗುರುತಿನ ಪುರಾವೆ ಆಗಿರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಬಡವರ ಆಧಾರಸ್ಥಂಭವಾಗಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಬಾರದೆಂದು ಆಗ್ರಹಿಸಿದರು.