HomeGadag Newsಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ

ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಕಳೆದ 5 ವರ್ಷದಲ್ಲಿಯೇ 7ನೇ ವೇತನ ಆಯೋಗವು ಜಾರಿಯಾಗಬೇಕಿತ್ತು. ಆದರೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 7 ವರ್ಷಗಳು ಕಳೆದರೂ ಜಾರಿಯಾಗಿಲ್ಲ. ಶೀಘ್ರದಲ್ಲಿಯೇ ಜಾರಿಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶೇಖರಗೌಡ ಪಾಟೀಲ್ ಆಗ್ರಹಿಸಿದರು.

ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ತಾಲೂಕು ನೌಕರರ ಸಂಘ ಹಾಗೂ ನಿವೃತ್ತ ನೌಕರರ ಸಂಘದ ಸಹಯೋಗದೊಂದಿಗೆ ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಉಪತಹಸೀಲ್ದಾರ್ ನಟರಾಜ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಸರ್ಕಾರವು ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ 7ನೇ ವೇತನ ಆಯೋಗ ಜಾರಿಗೊಳಿಸಬೇಕು ಮತ್ತು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ನೀಡುವಲ್ಲಿ ಬೇಜವಾಬ್ದಾರಿ ತೋರಿದರೆ ಎಲ್ಲಾ ಸರ್ಕಾರಿ ನೌಕರರು ಪ್ರತಿಭಟನೆಯನ್ನು ಮಾಡಬೇಕಾಗತ್ತದೆ ಎಂದರು.

ಈ ಸಂದರ್ಭದಲ್ಲಿ ಜಿ. ಮನೋಹರ, ಸೂರ್ಯನಾಯ್ಕ, ಸಂಗಯ್ಯ, ಹೊನ್ನಪ್ಪ, ರಾಜು, ಕೋಡಿಹಳ್ಳಿ ಮಂಜುನಾಥ ಸೇರಿದಂತೆ ಇತರರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!