ಅಂಗನವಾಡಿ ಕೇಂದ್ರ ತೆರೆಯಲು ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ವಾರ್ಡ್ ನಂ. 18ರ ಶ್ರೀ ಸಿದ್ದರಾಮೇಶ್ವರ ನಗರದಲ್ಲಿ ಅಂಗನವಾಡಿ ಕೇಂದ್ರವನ್ನು ತೆರೆಯುವಂತೆ ಆಗ್ರಹಿಸಿ ಕರ್ನಾಟಕ ಯುವ ರಕ್ಷಣಾ ವೇದಿಕೆ ವತಿಯಿಂದ ಸಿಡಿಪಿಓ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾಧ್ಯಕ್ಷ ರಿಯಾಜ ತಹಸೀಲದಾರ, ವಾಡ್ ನಂ.18ರಲ್ಲಿ ಅಂಗನವಾಡಿ ಕೇಂದ್ರವಿಲ್ಲದೇ ಇರುವುದರಿಂದ ಬೇರೆ ಬೇರೆ ವಾರ್ಡಿಗೆ ಹೋಗಿ ಬರಲು ಮಕ್ಕಳಿಗೆ ತೊಂದರೆ ಉಂಟಾಗುತ್ತಿದೆ. ಇದರಿಂದ ಎಷ್ಟೋ ಮಕ್ಕಳು ಅಂಗನವಾಡಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.ಇದರಿಂದ ಮಕ್ಕಳಲ್ಲಿ ಅಪೌಷ್ಠಿಕತೆ, ಅನಾರೋಗ್ಯ ಉಂಟಾಗುತ್ತಿದೆ. ಮಕ್ಕಳ ಮಾನಸಿಕ ಮತ್ತು ಸಾಮಾಜಿಕ ಬೆಳೆವಣಿಗೆಗೆ ಭದ್ರ ಅಡಿಪಾಯ ಹಾಕಲು ಅಂಗನವಾಡಿ ಕೇಂದ್ರ ಅತೀ ಅವಶ್ಯಕವಾಗಿದೆ. ಆದ್ದರಿಂದ ವಾರ್ಡನಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರ ತೆರಯಬೇಕೆಂದು ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮೋಹನ ಹೊಂಬಾಳಿ, ಜಾಫರ್ ಅತ್ತಾರ, ಈರಣ್ಣ ಚಿಕ್ಕತೋಟದ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here