ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ನಿಗದಿಯಾಗಿದ್ದು, ತಕ್ಷಣವೇ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ಆಗ್ರಹಿಸಿ ಗುರುವಾರ ಶಿರಹಟ್ಟಿ ತಾಲೂಕು ಸಮಗ್ರ ರೈತ ಹೋರಾಟ ಸಮಿತಿ ವತಿಯಿಂದ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ ಕುರಿ, ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ಷೇತ್ರದಲ್ಲಿ ಮೆಕ್ಕೆಜೋಳವನ್ನು ಮುಂಗಾರು ಹಂತದಲ್ಲಿ ಬಿತ್ತನೆ ಮಾಡಿದ್ದು, ಅ.15ರಿಂದ ಇಲ್ಲಿಯವರೆಗೆ ರೈತರು ಬೆಳೆ ಕಟಾವು ಮಾಡುತ್ತಿದ್ದು, ಮುಂದೆಯೂ ಕೆಲವರು ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಖರೀದಿದಾರರಿಂದ ರೈತರ ಆರ್ಥಿಕ ಪರಿಸ್ಥಿತಿ ಗಂಭೀರವಾಗುತ್ತಿದೆ. ಆದ್ದರಿಂದ ಪ್ರತಿ ಕ್ವಿಂಟಾಲ್‌ಗೆ ರಾಜ್ಯ ಸರ್ಕಾರದ 600 ರೂ ಪ್ರೋತ್ಸಾಹ ಧನ ಹಾಗೂ 2400 ರೂ ಬೆಂಬಲ ಬೆಲೆ ಸೇರಿದಂತೆ ಪ್ರತಿ ಕ್ವಿಂಟಾಲ್‌ಗೆ 3 ಸಾವಿರ ರೂ ಸಿಗುವ ಹಾಗೆ ವ್ಯವಸ್ಥೆ ಮಾಡಬೇಕೆಂದು ಮನವಿ ಮೂಲಕ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡ ರವಿಕಾಂತ ಅಂಗಡಿ, ಗೂಳಪ್ಪ ಕರಿಗಾರ, ಎಸ್.ಎಸ್. ಪಾಟೀಲ, ಸಂದೀಪ ಕಪ್ಪತ್ತನವರ, ಎಸ್.ಎಸ್. ಪಾಟೀಲ, ಸುರೇಶ ಹವಳದ, ತಿಪ್ಪಣ್ಣ ಕೊಂಚಿಗೇರಿ, ಪರಶುರಾಮ ಡೊಂಕಬಳ್ಳಿ, ರವಿ ಹಳ್ಳಿ, ಫಕ್ಕೀರೇಶ ಸಂಶಿಮಠ, ಶಿವಾನಂದ ಬಟ್ಟೂರ, ಬಸವರಾಜ ಕಲ್ಯಾಣಿ ಮುಂತಾದವರು ಉಪಸ್ಥಿತರಿದ್ದರು.



