ಹೆಸ್ಕಾಂ ಉಪವಿಭಾಗ ಪ್ರಾರಂಭಿಸಲು ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ನಗರದಲ್ಲಿ ಹೆಸ್ಕಾಂ ಉಪವಿಭಾಗ ಪ್ರಾರಂಭಿಸಬೇಕೆಂದು ಸ್ಥಳೀಯ ಕುಂದುಕೊರತೆ ನಿವಾರಣಾ ಸಮಿತಿ ವತಿಯಿಂದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಹಾಗೂ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅಕ್ಬರಸಾಬ ಯಾದಗಿರಿ, ಶಿರಹಟ್ಟಿಯಲ್ಲಿ ಹೆಸ್ಕಾಂ ಉಪವಿಭಾಗ ಮಾಡಲು ಹೆಸ್ಕಾಂ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ನಮ್ಮ ಬೇಡಿಕೆ ಕಾರ್ಯರೂಪಕ್ಕೆ ಬರದಿದ್ದಲ್ಲಿ ಉಗ್ರ ಹೋರಾಟ ನಡೆಸುತ್ತೇವೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಎನ್.ಆರ್. ಕುಲಕರ್ಣಿ, ಶ್ರೀನಿವಾಸ ಬಾರಬಾರ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here