ಬೆಂಗಳೂರು:- ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಖಂಡನೀಯ ಎಂದು RSS ಮುಖಂಡ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂವಿಧಾನ ಬಾಹಿರ. ಸಂವಿಧಾನವು ಧರ್ಮ ಆಧಾರಿತ ಮೀಸಲಾತಿ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಯಾರಾದರೂ ಹಾಗೆ ಮಾಡಿದರೆ ಅದು ನಮ್ಮ ಸಂವಿಧಾನ ಶಿಲ್ಪಿಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದರು.
ಇನ್ನೂ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ಕೊಡಲು ಮುಂದಾಗಿದ್ದ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಪ್ರಯತ್ನಗಳನ್ನು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ತಳ್ಳಿಹಾಕಿವೆ. ಅಂತಹ ಮೀಸಲಾತಿ ಒದಗಿಸಲು ಇರುವ ನಿಬಂಧನೆಗಳನ್ನು ನ್ಯಾಯಾಲಯಗಳು ತಿರಸ್ಕರಿಸಿವೆ ಎಂದು ತಿಳಿಸಿದರು.