ಬೆಂಗಳೂರು: ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ. ಹೌದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಗಳಲ್ಲಿ ಮುಸ್ಲಿಂಮರಿಗೆ ಶೇ 10 ರಷ್ಟು ಮೀಸಲಾತಿ ಇರುವುದನ್ನು 15% ಗೆ ಏರಿಕೆ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಶೇ, 10ರಿಂದ 15% ಮೀಸಲಾತಿ ತರಬೇಕು ಎಂಬ ಮನವಿಗೆ ಕ್ಯಾಬಿನೆಟ್ ಅಂಗೀಕರಿಸಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಾರಿಗೊಳಿಸುವ ಎಲ್ಲಾ ವಸತಿ ಯೋಜನೆಗಳಿಗೆ ಅನ್ವಯಿಸುತ್ತದೆ.
ರಾಜ್ಯದಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು ಇದೀಗ 15% ಏರಿಕೆ ಮಾಡಿ ಕ್ಯಾಬಿನೆಟ್ ಅನುಮೋದನೆ ಸಹ ನೀಡಿದೆ.