ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

0
Spread the love

ಬೆಂಗಳೂರು:- ರಾಜ್ಯ ಕಾಂಗ್ರೆಸ್‌ ಸರ್ಕಾರ ಗುತ್ತಿಗೆ ಮೀಸಲು ಬಳಿಕ ವಸತಿ ಯೋಜನೆಯಲ್ಲಿಯೂ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ. ಇಂದಿನ ಕ್ಯಾಬಿನೆಟ್‌ನಲ್ಲಿ ಈ ವಿಚಾರ ಚರ್ಚೆಯಾಗಿ ಒಪ್ಪಿಗೆ ಸಿಕ್ಕಿದೆ.

Advertisement

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರ್ ಅಶೋಕ್, ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರು ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ. ಮತಕ್ಕಾಗಿ ಇಂತಹ ನೀಚ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಆರ್‌ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ದುರಂತವನ್ನು ಮುಚ್ಚಿಹಾಕಲು ಇಂತಹ ವಿವಾದವನ್ನು ಹರಿಬಿಡಲಾಗುತ್ತಿದೆ. ಇದು ನಾಡಿನ ಜನರ ಹಕ್ಕನ್ನು ಸರ್ಕಾರ ಕಸಿದಿದೆ ಎಂದರು.

ಹೀಗೆಯೇ ಮುಂದುವರಿದರೆ ಸಿದ್ದರಾಮಯ್ಯ ಕೇವಲ ಮುಸ್ಲಿಂ ಸಮುದಾಯಕ್ಕೆ ಮೀಸಲಾದ ಮುಖ್ಯಮಂತ್ರಿಯಾಗುತ್ತಾರೆ. ಈ ಹಿಂದೆಯೇ ಮೀಸಲು ಹೆಚ್ಚಳಕ್ಕೆ ಮಾನ್ಯತೆ ಸಿಕ್ಕಿಲ್ಲ. ಈಗ ಹೊಸ ರೀತಿಯ ಮೀಸಲು ತಂದಿದ್ದಾರೆ. ಅಕ್ಟೋಬರ್‌ನಲ್ಲಿ ಕುರ್ಚಿ ಬಿಟ್ಟುಕೊಡಬೇಕೆಂಬ ಕಾರಣಕ್ಕಾಗಿ ಹೀಗೆ ಮಾಡಿದ್ದಾರೆ. ಮುಸ್ಲಿಮರೆಲ್ಲರೂ ನನ್ನ ಜೊತೆ ಬರಬೇಕೆಂದು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here