ಬೆಂಗಳೂರು:– ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ರಾಜ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಇದೀಗ ಅಧಿಕೃತವಾಗಿ ಸಿಎಂ ಕಚೇರಿ ಮಾಧ್ಯಮಗ ಪ್ರಕಟಣೆ ಹೊರಡಿಸಿದೆ. ಕನ್ನಡಿಗರ ಮೀಸಲಾತಿ ವಿಧೇಯಕವನ್ನು ಪುನರ್ ಪರಿಶೀಲಿಸುತ್ತೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಸಂತೋಷ್ ಲಾಡ್ ಹಾಗೂ ನಾಲ್ಕೂ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಾಗುತ್ತೆ. ಕ್ಯಾಬಿನೆಟ್‌ನಲ್ಲಿ ಸೂಕ್ತವಾಗಿ ಮಾಹಿತಿ ಹಂಚಿಕೆಯಾಗದೆ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಈ ಅಧಿವೇಶನದಲ್ಲಿ ವಿಧೇಯಕ ಮಂಡಿಸದಿರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ