ಬೆಂಗಳೂರು: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಿದೆ.
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ. ಆದರೆ, ಶೇ4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ. ಹೀಗಾಗಿ ಸರ್ಕಾರ ದ್ವಂದ್ವದಿಂದ ಕೂಡಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆದ್ರೆ ಸರ್ಕಾರದ ಮುಂದೆ ಯಾವುದೇ ಮೀಸಲಾತಿ ನೀಡುವ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.