ಸಂಪನ್ಮೂಲದ ಒತ್ತಡದಲ್ಲಿರುವ ಸಿದ್ದರಾಮಯ್ಯ ಎಲ್ಲದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ: BSY

0
Spread the love

ಬೆಂಗಳೂರು: ಐಟಿ ದಾಳಿಯಲ್ಲಿ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ. ಇದು ಲೂಟಿ ಸರ್ಕಾರ ಎಂಬುದು ಸಾಬೀತಾಗಿದೆ. ಎಂದು ಬಿಎಸ್ ಯಡಿಯೂರಪ್ಪನವರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವೆ ನಾಯಕತ್ವ ಜಗ್ಗಾಟ ತಾರಕಕ್ಕೇರಿದೆ. ವರ್ಗಾವಣೆ ದಂಧೆ ಮುಂದುವರಿದಿದೆ. ಉಪಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ಶುರುವಾಗಿದೆ.

Advertisement

ಬರ ಪರಿಹಾರ ಕೈಗೊಳ್ಳದೇ ಕೇಂದ್ರ ಸರ್ಕಾರಕ್ಕೆ ಮೂದಲಿಸುವ ಕಾರ್ಯದಲ್ಲಿ ಸರ್ಕಾರದ ನಿರತವಾಗಿದೆ. ವಿಪಕ್ಷದ ಮೇಲೆ ಸರ್ಕಾರದ ದಾಳಿ ಪ್ರಜಾಪ್ರಭುತ್ವದ ಅಣಕ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ಸಂಪನ್ಮೂಲದ ಒತ್ತಡದಲ್ಲಿರುವ ಸಿದ್ದರಾಮಯ್ಯ ಎಲ್ಲದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ. ರಾಜ್ಯ ಸರ್ಕಾರ ಎಟಿಎಂ ಆಗಿರುವುದರಿಂದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಬಿಎಸ್​ವೈ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here