ಗದಗ: ಶ್ರೀ ಜಗದ್ಗುರು ತೋಂಟದಾರ್ಯ ಮಠ ಯಡಿಯೂರ-ಗದಗ, ಲಿಂಗಾಯತ ಪ್ರಗತಿಶೀಲ ಸಂಘ ಗದಗ ಹಾಗೂ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಅವ್ವನ ಕುರಿತ ವಿಶೇಷ ಶಿವಾನುಭವ, ಪ್ರತಿಭಾ ಪುರಸ್ಕಾರ ಹಾಗೂ ಮಹಿಳಾ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ರೂವಾರಿಗಳಾದ ಅವ್ವ ಸೇವಾ ಟ್ರಸ್ಟ್‌ನ ಗದಗಿನ ಸಂಚಾಲಕರಾದ ಡಾ. ಬಸವರಾಜ ಧಾರವಾಡ ಅವರನ್ನು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟಿ, ಅವ್ವ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಶಶಿ ಸಾಲಿ ಮುಂತಾದವರು ಉಪಸ್ಥಿತರಿದ್ದರು.
Trending Now



