HomeGadag Newsಜನರ ಸಮಸ್ಯೆಗಳಿಗೆ ಸ್ಪಂದಿಸಿ, ಶ್ರದ್ಧೆಯಿಂದ ಕೆಲಸ ಮಾಡಿ

ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಶ್ರದ್ಧೆಯಿಂದ ಕೆಲಸ ಮಾಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸದುದ್ದೇಶ ಹೊಂದಿದ್ದು, ಈ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಸಭೆಯ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆಡಳಿತ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬಹುದೊಡ್ಡ ಬದಲಾವಣೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಬಡಜನರ ಸೇವೆ ಮಾಡಲು ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ. ಯೋಜನೆಯ ಮಹತ್ವವನ್ನು ಅರ್ಥೈಸಿಕೊಳ್ಳುವುದು ಹಾಗೂ ಅವುಗಳ ಪೂರ್ಣ ಪ್ರಮಾಣದ ಅನುಷ್ಠಾನಕ್ಕಾಗಿ ಇಲಾಖಾಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಆಸಕ್ತಿಯಿಂದ ಕಾರ್ಯನಿರ್ವಹಿಸುವುದು ಮುಖ್ಯ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಶ್ರದ್ಧೆಯಿಂದ ಕೆಲಸ ಮಾಡಬೇಕು. ಬಡಜನರ ಸೇವೆ ಪವಿತ್ರ ಕೆಲಸವಾಗಿದ್ದು ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿಯೇ ತಲುಪಿದಾಗ ಅದರ ಸಾರ್ಥಕತೆ ಕಾಣಬಹುದಾಗಿದೆ ಎಂದರು.

ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡುತ್ತಾ, ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ಯಾವುದೇ ಸಮಸ್ಯೆಗಳು ಉಂಟಾದರೆ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿನಿಧಿಗಳ ಸಹಕಾರ ಸದಾಕಾಲ ಇರುತ್ತದೆ. ಅರ್ಹ ಫಲಾನುಭವಿಗಳು ಯೋಜನೆಗಳ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಜೂನ್ 2025ರವರೆಗೆ ಗದಗ ತಾಲೂಕಿನಲ್ಲಿ 80911 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 80447 ಅರ್ಜಿಗಳಿಗೆ ಮಂಜೂರಾತಿ ದೊರೆತು ಶೇ. 99.42ರಷ್ಟು ಸಾಧನೆಯಾಗಿದೆ.

ಗದಗ ನಗರದಲ್ಲಿ (ಐಆರ್‌ಎ) ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯ ಸರ್ಕಾರ ಅನ್ನಭಾಗ್ಯ ಹಂಚಿಕೆ ಯೋಜನೆಯಡಿ ಒಟ್ಟು 33529 ಪಡಿತರ ಕಾರ್ಡ್ಗಳಿದ್ದು, 5544.40 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಗದಗ ಗ್ರಾಮೀಣ ಭಾಗದಲ್ಲಿ ಒಟ್ಟು 48402 ಪಡಿತರ ಕಾರ್ಡ್ಗಳಿದ್ದು, 7498.05 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ 30-9-2025ರವರೆಗೆ ಗದಗ ನಗರ ಉಪವಿಭಾಗದಲ್ಲಿ 48708 ಸ್ಥಾವರಗಳು ಅರ್ಹವಾಗಿದ್ದು, 48473 ಸ್ಥಾವರಗಳು ನೋಂದಣಿಯಾಗಿ, ಶೇ.99.52 ಪ್ರಗತಿಯಾಗಿದೆ. ಗದಗ ಗ್ರಾಮೀಣ ಉಪವಿಭಾಗದಲ್ಲಿ 53268 ಸ್ಥಾವರಗಳು ಅರ್ಹವಾಗಿದ್ದು, 53030 ಸ್ಥಾವರಗಳು ನೋಂದಣಿಯಾಗಿ ಶೇ 99.55ರಷ್ಟು ಪ್ರಗತಿಯಾಗಿದೆ.

ಯುವ ನಿಧಿ ಯೋಜನೆಯಡಿ ಜುಲೈ 2025ರಲ್ಲಿ ಅರ್ಹ ಫಲಾನುಭವಿಗಳಿಗೆ 53,79,000 ರೂ. ಹಣವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗಿದೆ. ಗದಗ ತಾಲೂಕಿನಲ್ಲಿ ಯುವ ನಿಧಿ ಯೋಜನೆಯಡಿಯಲ್ಲಿ ಜುಲೈ 2025ರವರೆಗೆ 2159 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಶಕ್ತಿ ಯೋಜನೆಯಡಿ ಗದಗ ತಾಲೂಕಿನಲ್ಲಿ 3,54,00,000 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಸಭೆಗೆ ಮಾಹಿತಿ ಒದಗಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಉಪಾಧ್ಯಕ್ಷೆ ನೀಲಮ್ಮ ಬೋಳನವರ, ಸದಸ್ಯರುಗಳಾದ ಈರಣ್ಣ ಹುಣಸಿಕಟ್ಟಿ, ಷರೀಫ್ ಬಿಳೆಯಲಿ, ತಾಲೂಕು ಗ್ಯಾರಂಟಿ ಸದಸ್ಯರುಗಳಾದ ದಯಾನಂದ ಪವಾರ, ಶಂಭು ಕಾಳೆ, ಸಾವಿತ್ರಿ ಹೂಗಾರ, ಸಂಗು ಕೆರಕಲಕಟ್ಟಿ, ಎನ್.ಬಿ. ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸ್.ಎನ್. ಬಳ್ಳಾರಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ ಸೇರಿದಂತೆ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು.

“ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪ್ರಾಮಾಣಿಕತೆಯಿರಬೇಕು. ಆಡಳಿತದಲ್ಲಿ ಪಾರದರ್ಶಕತೆ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಯೋಜನೆಗಳ ಸೌಲಭ್ಯ ಅರ್ಹರಿಗೆ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು”

ಡಾ. ಎಚ್.ಕೆ. ಪಾಟೀಲ.
ಜಿಲ್ಲಾ ಉಸ್ತುವಾರಿ ಸಚಿವರು.

ಗದಗ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಶೇ 99.5ರಷ್ಟು ಗುರಿ ತಲುಪಿದ್ದು, ಗದಗ ಜಿಲ್ಲೆಯು ಶೇ. 100ರಷ್ಟು ಗುರಿ ಸಾಧಿಸಿ ರಾಜ್ಯದಲ್ಲಿ ಅಗ್ರಸ್ಥಾನ ಪಡೆಯಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!