HomeKarnataka Newsವಿಧಾನಸೌಧಕ್ಕೆ ಮರಳುವುದು ದೇವರ ಇಚ್ಛೆ: ಕೇಂದ್ರ ಸಚಿವ ಕುಮಾರಸ್ವಾಮಿ

ವಿಧಾನಸೌಧಕ್ಕೆ ಮರಳುವುದು ದೇವರ ಇಚ್ಛೆ: ಕೇಂದ್ರ ಸಚಿವ ಕುಮಾರಸ್ವಾಮಿ

For Dai;y Updates Join Our whatsapp Group

Spread the love

ಬೆಂಗಳೂರು: ವಿಧಾನಸೌಧಕ್ಕೆ ಮತ್ತೆ ಮರಳುವುದು ಭಗವಂತನ ಇಚ್ಛೆ ಹಾಗೂ ಜನರ ಆಶೀರ್ವಾದದ ಮೇಲೆ ಅವಲಂಬಿತವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

ಎರಡು ವರ್ಷಗಳ ಬಳಿಕ ಕೈಗಾರಿಕಾ ಸಚಿವರ ಜೊತೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ್ದ ವೇಳೆ, ಮಾಧ್ಯಮ ಪ್ರತಿನಿಧಿಗಳು ಮತ್ತೆ ಯಾವಾಗ ವಿಧಾನಸೌಧಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅವರು, ಭವಿಷ್ಯವನ್ನು ಭಗವಂತನೇ ನಿರ್ಧರಿಸುತ್ತಾನೆ. ಜನರ ಆಶೀರ್ವಾದ ಹಾಗೂ ಭಗವಂತನ ಇಚ್ಛೆಯಂತೆ ನಾವು ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದು ಭಗವಂತನ ನಿರ್ಧಾರ ಎಂದು ಹೇಳಿದ ಅವರು, ಅದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ನಾವು ಮೈತ್ರಿ ಪಕ್ಷಗಳ ಹೊಂದಾಣಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ದೆಹಲಿಯ ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದು, ಜನರ ಆಶೀರ್ವಾದದೊಂದಿಗೆ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮರಳಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!