Pahalgam Terror: ಪ್ರತೀಕಾರದ ದಾಳಿ: ಉಗ್ರ ಆಸೀಫ್ ಶೇಖ್ ಮನೆ ಪುಡಿಪುಡಿ ಮಾಡಿದ ಸೇನೆ

0
Spread the love

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದಿರುವ ಭಯಾನಕ ದಾಳಿ, ಉಗ್ರರ ನರಮೇಧ ಇಡೀ ಭಾರತವೇ ಕುದಿಯುವಂತೆ ಮಾಡಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬೆನ್ನಲ್ಲೇ ರಾಜ್ಯ ಪ್ರವಾಸಿ ತಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.

Advertisement

ಇದರ ಬೆನ್ನಲ್ಲೇ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್ ಉಗ್ರನ ಮನೆ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಮೊಂಘಮಾ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದ ನಡೆದ ಪ್ರಬಲ ಸ್ಫೋಟದಲ್ಲಿ ಸಕ್ರಿಯ ಭಯೋತ್ಪಾದಕನ ಮನೆ ನಾಶವಾಗಿದೆ.

ಈ ಮನೆ ಆಸಿಫ್ ಶೇಖ್‌ಗೆ ಸೇರಿದ್ದು, ಏಪ್ರಿಲ್ 22 ರಂದು ಕಣಿವೆಯಲ್ಲಿ 26 ಅಮಾಯಕರ ಜೀವವನ್ನು ಬಲಿ ಪಡೆದ ಕ್ರೂರ ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಈತನ ಹೆಸರು ಮುನ್ನೆಲೆಗೆ ಬಂದಿತ್ತು. ಈತ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಸ್ಥಳೀಯ ಕಮಾಂಡರ್ ಆಗಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮನೆಯ ಆವರಣದೊಳಗೆ ಕೆಲವು ಅನುಮಾನಾಸ್ಪದ ವಸ್ತುಗಳನ್ನು ಗಮನಿಸಿದ್ದಾರೆ. ಅಪಾಯದ ಮುನ್ಸೂಚನೆ ಅರಿತ ಪಡೆ ಹಿಂದಕ್ಕೆ ಬಂದಿದ್ದಾರೆ.

ಸ್ವಲ್ಪ ಸಮಯದ ನಂತರ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿತು. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ ಮನೆಯ ಒಳಗಡೆ ಇದ್ದ ಅನುಮಾನಾಸ್ಪದ ಸ್ಫೋಟಕ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.


Spread the love

LEAVE A REPLY

Please enter your comment!
Please enter your name here