ಶ್ರೀನಗರ:- ಸೇಡಿಗೆ ಸೇಡು, ಮುಯ್ಯಿಗೆಮುಯ್ಯಿ ಎಂಬಂತೆ ಭಾರತೀಯ ಸೇನೆಯು, ಕಾಶ್ಮೀರದಲ್ಲಿ ಮತ್ತೊಬ್ಬ ಉಗ್ರನ ಮನೆಯನ್ನು ಧ್ವಂಸ ಮಾಡಿದೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಘಟನೆಗೆ ಸಂಬಂಧಿಸಿದಂತೆ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆಯನ್ನು ಭಾರತೀಯ ಸೇನೆ ಉಡೀಸ್ ಮಾಡಿದೆ.
ಎಸ್, ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಉಗ್ರ ಫಾರೂಕ್ ಮನೆಯನ್ನು ಐಇಡಿ ಸ್ಫೋಟಿಸಿ ಛಿದ್ರಛಿದ್ರ ಮಾಡಿದ್ದು, ಈ ಮೂಲಕ ಇಲ್ಲಿವರೆಗೆ ಒಟ್ಟು 6 ಉಗ್ರರ ಮನೆಯನ್ನು ನಾಶಪಡಿಸಿದಂತಾಗಿದೆ.
ಪಹಲ್ಗಾಮ್ ದಾಳಿಯ ನಂತರ ಪುಲ್ವಾಮಾ, ಶೋಪಿಯಾನ್, ಅನಂತ್‌ನಾಗ್, ಕುಲ್ಗಾಮ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಸ್ಫೋಟಕಗಳನ್ನು ಬಳಸಿ ಆರು ಭಯೋತ್ಪಾದಕರ ಮನೆಗಳನ್ನು ಕೆಡವಲಾಗಿದೆ. ಈ ಎಲ್ಲಾ ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾಗೆ ಸೇರಿದವರಾಗಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿದು ಬಂದಿದೆ.



