ವಿಜಯನಗರ: ಕಂದಾಯ ಇಲಾಖೆಯಿಂದ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾತನಾಡಿದ ಅವರು, 5 ಗ್ಯಾರಂಟಿ ಅನುಷ್ಠಾನ ಹಿನ್ನೆಲೆಯಲ್ಲಿ ನಾವು ನಾನಾ ಕಡೆ ಸಮಾವೇಶ ಮಾಡಿದ್ದೇವೆ. ಜನರಲ್ಲಿ ಹೊಸ ಶಕ್ತಿ ತುಂಬಬೇಕು.
ಕಂದಾಯ ಇಲಾಖೆಯಿಂದ 1 ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತೇವೆ. ಪಕ್ಷ, ಸರಕಾರ ಒಟ್ಟಿಗೆ ಸೇರಿ ದೊಡ್ಡ ಕಾರ್ಯಕ್ರಮ ಮಾಡುತ್ತಿದ್ದೇವೆ. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದರು.
ಇನ್ನೂ ನವಿಲೆ ಜಲಾಶಯದ ಕುರಿತು ನಾವು ಬಜೆಟ್ ನಲ್ಲಿ ಪ್ರಸ್ತಾಪ ಮಾಡಿದ್ದೇವೆ. ನಾನು ಆಂಧ್ರ ಸಿಎಂ ಜತೆ ಮಾತನಾಡಿದ್ದೇನೆ. ಟೆಕ್ನಿಕಲ್ ಟೀಂ, ಬಂದಿದೆ ಪರಿಶೀಲನೆ ಮಾಡಿದೆ. ನೀರು ಉಳಿಸಿಕೊಳ್ಳೋಕೆ, ಪರ್ಯಾಯ ವ್ಯವಸ್ಥೆ ಮಾಡುತ್ತೇವೆ.
ಎಲ್ಲಾ ಗೇಟ್ ಗಳ ಬದಲಾವಣೆ ಮಾಡುತ್ತೇವೆ. ಗೇಟ್ ಗಳ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಬಸವಸಾಗರ ಜಲಾಶಯಕ್ಕೆ ನೀರು ಶೀಪ್ಟ್ ಮಾಡಲು ಚಿಂತನೆ ನಡೆಸಲಾಗಿದೆ. ಮೂರು ರಾಜ್ಯ ಸೇರಿ ಅದನ್ನು ಮಾಡುತ್ತೇವೆ ಎಂದರು.