ಚಿಕ್ಕಮಗಳೂರು : 5 ಸಾವಿರ ಲಂಚ ಸ್ವೀಕರಿಸುವಾಗ ರೆವಿನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ ಜರುಗಿದೆ.
Advertisement
ಕಾಂತರಾಜ್, ಲೋಕಾಯುಕ್ತ ಬಲೆಗೆ ಬಿದ್ದ RI ಎಂದು ಗುರುತಿಸಲಾಗಿದೆ.
ತರೀಕೆರೆ ತಾಲೂಕಿನ ಹುಣಸಘಟ್ಟ ನಾಡಕಚೇರಿ ರೆವಿನ್ಯೂ ಇನ್ಸ್ ಪೆಕ್ಟರ್ ಕಾಂತರಾಜ್ ಅವರು, ತಂದೆಯಿಂದ ಮಗನಿಗೆ ಖಾತೆ ಬದಲಿಸಲು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ದೂರು ಆಧರಿಸಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ತರೀಕೆರೆ ತಾಲೂಕು ಕಚೇರಿಯಲ್ಲೇ ಕಾಂತರಾಜ್ ಸಿಕ್ಕಿಬಿದ್ದಿದ್ದಾನೆ.
ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.