HomeBengaluru Newsಪರಪ್ಪನ ಅಗ್ರಹಾರ ಜೈಲಿನಲ್ಲಿ ಗಲಾಟೆ: ಕೈದಿಗಳ ಮೇಲೆ ಲಾಠಿ ಪ್ರಹಾರ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗಲಾಟೆ: ಕೈದಿಗಳ ಮೇಲೆ ಲಾಠಿ ಪ್ರಹಾರ

For Dai;y Updates Join Our whatsapp Group

Spread the love

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ಸಂಭವಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, ಜೈಲಿನಿಂದಲೇ ವಿಡಿಯೋ ಹೊರಬಂದ ಪ್ರಕರಣದ ಹಿನ್ನೆಲೆ ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ನೇತೃತ್ವದಲ್ಲಿ ವಿಚಾರಣಾ ಬಂಧಿಗಳ ವಿಭಾಗದ ಟವರ್-1ರಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ತಪಾಸಣೆಗೆ ಅಡ್ಡಿಪಡಿಸಿದ ಕೈದಿಗಳಾದ ಇನಾಕ್ ಜಾಯ್, ವೋಕು ಆರೆಂಜಿ ಸೇರಿದಂತೆ ಕೆಲವರು ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ತಕ್ಷಣವೇ ಕ್ರಮ ಕೈಗೊಂಡು ಕೈದಿಗಳನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬ್ಯಾರಕ್‌ಗಳಲ್ಲಿ ಅಡಗಿಸಿಟ್ಟಿದ್ದ 10ಕ್ಕೂ ಹೆಚ್ಚು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗಲಾಟೆ ಮಾಡಿದ ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!