ಮಂಡ್ಯ:- ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿರುವ ಘಟನೆ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಜರುಗಿದೆ.
Advertisement
ಇನ್ನೂ ಘಟನೆ ಖಂಡಿಸಿ ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ಇಂದು ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದಾರೆ.
ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಬಳಿಕ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.
ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.