ಕಾಂತಾರ 1 ಬಿಡುಗಡೆಗೂ ಮುನ್ನ ಮತ್ತೊಂದು ಸಿನಿಮಾ ಘೋಷಿಸಿದ ರಿಷಬ್‌ ಶೆಟ್ಟಿ

0
Spread the love

ಕಾಂತಾರ ಸಿನಿಮಾದ ಬಳಿಕ ನಟ ರಿಷಬ್‌ ಶೆಟ್ಟಿ ಪ್ಯಾನ್‌ ಇಂಡಿಯಾ ನಟನಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ರಿಷಬ್‌ ಶೆಟ್ಟಿ ‘ಕಾಂತಾರ ಅಧ್ಯಾಯ 1’ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದು ಸದ್ಯದಲ್ಲೇ ಸಿನಿಮಾ ಬಿಡುಗಡೆ ಆಗಲಿದೆ. ಇದೀಗ ಕಾಂತಾರ ಅಧ್ಯಾಯ 1 ಬಿಡುಗಡೆಗೂ ಮುನ್ನವೇ ಮತ್ತೊಂದು ಸಿನಿಮಾ ಘೋಷಿಸಿದ್ದಾರೆ.

Advertisement

ಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಗರಡಿಯಲ್ಲಿ ಪಳಗಿರುವ ತೆಲುಗಿನ ನಿರ್ದೇಶಕ ಅಶ್ವಿನ್‌ ಗಂಗರಾಜು ನಿರ್ದೇಶನದ ಐತಿಹಾಸಿಕ ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ಸಿತಾರಾ ಎಂಟರ್‌ಟೇನ್‌ಮೆಂಟ್‌ನ ನಾಗವಂಶಿ ಮತ್ತು ಸಾಯಿ ಸೌಜನ್ಯ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ರಿಷಬ್‌ ಶೆಟ್ಟಿ ನಟನೆಯ ಹೊಸ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿದ್ದು, ‘ಸುಟ್ಟ ಭೂಮಿಯಿಂದ ಒಬ್ಬ ಬಂಡುಕೋರ ಹುಟ್ಟಿದ’ ಎಂಬ ಟ್ಯಾಗ್‌ಲೈನ್‌ ನೀಡಲಾಗಿದೆ.

‘ಎಲ್ಲ ಬಂಡುಕೋರರೂ ಯುದ್ಧವನ್ನು ಆಯ್ಕೆ ಮಾಡುವುದಿಲ್ಲ. ಕೆಲವರನ್ನು ವಿಧಿ ಆಯ್ಕೆ ಮಾಡುತ್ತದೆ ಮತ್ತು ಈ ಸಿನಿಮಾ ಅಂಥಾ ಒಬ್ಬ ಬಂಡುಕೋರನ ಕಥೆ ಹೇಳುತ್ತದೆ’ ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here