ಹಾಸನ:– ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಎರಡು ಸಾರಿಗೆ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಜರುಗಿದೆ.
Advertisement
ಘಟನೆಯಲ್ಲಿ ಎರಡು ಬಸ್ಸುಗಳಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು,ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ಬಸ್ಸು ಮೂಡಿಗೆರೆಗೆ ತೆರಳುತ್ತಿದ್ದರೆ, ಇನ್ನೊಂದು ಬಸ್ಸು ಸಕಲೇಶಪುರಕ್ಕೆ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ.
ಬೆಳಗ್ಗೆ ಅಪಘಾತ ಸಂಭವಿಸಿದ್ದರಿಂದ ಎರಡು ಬಸ್ಸಿನಲ್ಲಿ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ತೆರಳುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.