ಆನೇಕಲ್:- ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಮುಂಭಾಗ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಆನೇಕಲ್ ಪಟ್ಟಣದ ಬಹದ್ದೂರಪುರ ನಿವಾಸಿ 20 ವರ್ಷದ ಮನೋಜ್ ಮೃತ ಸವಾರ. ಈತ ವಿಶ್ವಚೇತನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಹೊಸೂರು ಕಡೆಯಿಂದ ಆನೇಕಲ್ ಮಾರ್ಗವಾಗಿ ಲಾರಿ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಲಾರಿ ಡಿಕ್ಕಿಯೊಡೆದಿದೆ.
ಪರಿಣಾಮ ಬೈಕ್ ಸವಾರ ಮನೋಜ್ ಗಂಭೀರವಾಗಿ ಗಾಯಗೊಂಡಿದೆ. ಕೂಡಲೇ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.