ರಸ್ತೆ ಅಪಘಾತ: ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು!

0
Spread the love

ನೆಲಮಂಗಲ:- ಟಿಪ್ಪರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆಯ ಬಳಿ ಜರುಗಿದೆ.

Advertisement

ಟಿಪ್ಪರ್ ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಚಾಲಕನ ಗುರುತು ಪತ್ತೆಯಾಗಿಲ್ಲ.

ನೆಲಮಂಗಲ ಮೂಲಕ ತುಮಕೂರು ಕಡೆ ಸಾಗುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕನ ಅತೀ ವೇಗ ಅಪಘಾತಕ್ಕೆ ಕಾರಣವಾಗಿದೆ. ಲಾರಿ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here