ಚಾಮರಾಜನಗರ:- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಜಗದೀಶ್ ಸಾವಿಗೀಡಾದ ದುರ್ದೈವಿ. ಈತ ಸಕಲೇಶಪುರ ಮೂಲದವನು ಎಂದು ತಿಳಿದು ಬಂದಿದೆ. ಕೇರಳ ಮೂಲದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆ ಪಟ್ಟಣದತ್ತ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ತೆರಕಣಾಂಬಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.