ಕೊಲ್ಕತ್ತಾ:- ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಗುದ್ದಿದ್ದ ಪರಿಣಾಮ ಬಸ್ಸಿನಲ್ಲಿದ್ದ 10 ಮಂದಿ ಯಾತ್ರಿಕರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಜಿಲ್ಲೆಯ ಮೋತಿಹಾರಿನ ಯಾತ್ರಿಕರು ದಕ್ಷಿಣ 24 ಪರಗಣ ಜಿಲ್ಲೆಯ ಗಂಗಾಸಾಗರ್‌ಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರಲ್ಲಿ ಎಂಟು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಅಲ್ಲದೇ ಘಟನೆಯಲ್ಲಿ 35 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಬಿಹಾರ ಸಿಎಂ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.