ಹಾವೇರಿ:- ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಮೇಲೆ ಕಾರು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ನಗರ ಹೊರವಲಯದ ತೋಟದಯಲ್ಲಾಪುರ ಗ್ರಾಮದ ಬಳಿ ಜರುಗಿದೆ.
Advertisement
ಘಟನೆಯಿಂದ ಓರ್ವರಿಗೆ ಗಂಭೀರ ಗಾಯವಾಗಿದೆ. ಮೃತರ ಹೆಸರು ಪತ್ತೆಯಾಗಿಲ್ಲ. ಮೃತರು ದಾವಣಗೆರೆ ಮೂಲದವರು ಎನ್ನಲಾಗಿದೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರೋಡ್ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ರಭಸಕ್ಕೆ ಆಟೋದಲ್ಲಿದ್ದ ಪೇರಳೆ ಮತ್ತು ಚಿಕ್ಕು ಹಣ್ಣುಗಳು ಚೆಲ್ಲಾಪಿಲ್ಲಿಯಾಗಿವೆ.
ಆಟೋ ಹುಬ್ಬಳ್ಳಿಯಿಂದ ರಾಣೆಬೆನ್ನೂರು ಕಡೆಗೆ ತೆರಳುತ್ತಿತ್ತು. ಕಾರು ದಾವಣಗೆರೆ ಕಡೆಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಹಾವೇರಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.