ಮೈಸೂರು:- ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು – ಹೆಮ್ಮರಗಾಲ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಅರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಕವಲಂದೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.



