ವಿಜಯಪುರ:- ವಿಜಯಪುರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಮೇಲೆ ಕ್ರೇನ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ 40 ವರ್ಷದ ಶಿವಪುತ್ರಪ್ಪ ಭಜಂತ್ರಿ ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪಟ್ಟಣದ ಹೋಂಡಾ ಶೋರೂಂ ಬಳಿ ಮುದ್ದೇಬಿಹಾಳ-ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.