ಚಿತ್ರದುರ್ಗ:- ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಲಾರಿ-ಇನೊವಾ ಕಾರು ನಡುವೆ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಜರುಗಿದೆ.
ಮೃತರನ್ನು ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರ ಗುರುತು ಇನ್ನೂ ತಿಳಿದು ಬಂದಿಲ್ಲ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ. ಹೀಗಾಗಿ ಅವರು ಕಾರಿನಲ್ಲಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇಗುಲಕ್ಕೆ ಹೋಗಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ. ಇನ್ನು ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು ಮೂಲದ ಇನೊವಾ ಕಾರು, ತಮಿಳುನಾಡು ಪಾಸಿಂಗ್ ಇರುವ ಲಾರಿ ಹಿಂಬದಿಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.