ಧಾರವಾಡ:- ಇಲ್ಲಿನ ನರೇಂದ್ರ ಬೈಪಾಸ್ ಬಳಿ ನಿಂತ ಲಾರಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಸಾವಿಗೀಡಾದ ವ್ಯಕ್ತಿಯನ್ನು ವಿಶ್ವಾಸ ಎಂದು ಗುರುತಿಸಲಾಗಿದೆ.
Advertisement
ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.