ಚಾಮರಾಜನಗರ:- ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಅಡುಗೆ ಭಟ್ಟ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕಾಳನಹುಂಡಿ ಗೇಟ್ ಬಳಿ ಜರುಗಿದೆ.
ಅಡುಗೆಭಟ್ಟನಾಗಿ ಕೆಲಸ ಮಾಡುತ್ತಿದ್ದ 45 ವರ್ಷದ ಮಲ್ಲೇಶ್ ಮೃತ ವ್ಯಕ್ತಿ. ಇವರು, ಚಾಮರಾಜನಗರದ ಕಲ್ಯಾಣ ಮಂಟಪದಲ್ಲಿ ಅಡುಗೆ ಕೆಲಸವನ್ನು ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸ್ಸು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಚಾಮರಾಜನಗರ ಗ್ರಾಮಾಂತರ ಪೊಲೀಸರು, ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.



