ರಸ್ತೆ ಅಪಘಾತ: ಓವರ್‌ ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ದುರ್ಮರಣ!

0
Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೈಸೂರು ರೋಡ್ ಫ್ಲೈಓವರ್‌ನಲ್ಲಿ ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್‌ಗಳು ಟಚ್ ಆಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಆಕಾಶ್ ಮತ್ತು ಅಫ್ಜಲ್ ಮೃತರು. ಘಟನೆಯಲ್ಲಿ ಮಣಿ ಮತ್ತು ಆಸಿಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದೆ. ಮಂಗಳೂರು ಮೂಲದವರಾದ ಆಸಿಮ್, ಅಫ್ಜಲ್ ವಿಜಯನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ನಿನ್ನೆ ರಾತ್ರಿ 2ರ ಸುಮಾರಿಗೆ ಊಟಕ್ಕೆಂದು ಹೊರಗೆ ಹೊರಟಿದ್ದರು. ಇದೇ ವೇಳೆ ಕೆಪಿ ಅಗ್ರಹಾರ ನಿವಾಸಿಗಳಾದ ಮೆಕಾನಿಕ್ ಕೆಲಸ ಮಾಡುತ್ತಿದ್ದ ಮಣಿ, ಆಕಾಶ್ ಅದೇ ರಸ್ತೆಯಲ್ಲಿ ಹೊರಟಿದ್ದರು. ಈ ವೇಳೆ ಓವರ್‌ಟೇಕ್ ಮಾಡಲು ಬೈಕ್ ಸವಾರರಿಬ್ಬರು ವೇಗವಾಗಿ ಓಡಿಸಿದ್ದಾರೆ. ಪರಿಣಾಮ ಬೈಕ್‌ಗಳು ಪರಸ್ಪರ ಟಚ್ ಆಗಿದ್ದು, ರಸ್ತೆಗೆ ಬಿದ್ದಿದ್ದಾರೆ.

ಬಿದ್ದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here