ಚಿಕ್ಕಬಳ್ಳಾಪುರ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಗ್ರಾಮದ ಬಳಿ ಜರುಗಿದೆ.
Advertisement
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಒಬಳೇಷ್ (45), ಮೆಕ್ಯಾನಿಕ್ ಅಜ್ಗರ್ (35) ಮೃತರು. ಎರಡು ಸ್ಪ್ಲೆಂಡರ್ ಬೈಕ್ ಗಳ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ ಒಂದು ಬೈಕ್‌ನಲ್ಲಿದ್ದ ಇಬ್ಬರು ಹಿಂಬದಿ ಸವಾರರು ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.