ರಸ್ತೆ ಅಪಘಾತ: ಸ್ಥಳದಲ್ಲೇ ಇಬ್ಬರು ಯುವತಿಯರು ಸಾವು!

0
Spread the love

ದಾವಣಗೆರೆ:- ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಜರುಗಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜರುಗಿದೆ.

Advertisement

24 ವರ್ಷದ ಸುಮಾ, 23 ವರ್ಷದ ಪಲ್ಲವಿ ಮೃತ ದುರ್ದೈವಿಗಳು. ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಬೈಕ್ ಸವಾರ ಸಚಿನ್‌ಗೆ ಗಂಭೀರ ಗಾಯಗಳಾಗಿವೆ.

ಸಚಿನ್ ಬುಧವಾರ ಸಂಜೆ ಸಂಬಂಧಿಗಳಾದ ಸುಮಾ ಮತ್ತು ಪಲ್ಲವಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬರುವಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಯುವತಿಯರು ರಸ್ತೆಗೆ ಎಸೆಯಲ್ಪಟ್ಟಿದ್ದರು. ಸುಮಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗಳಾಗಿದ್ದ ಪಲ್ಲವಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ.


Spread the love

LEAVE A REPLY

Please enter your comment!
Please enter your name here