ಹಾಸನ:- ಮಕ್ಕಳಿಗೆ ಚಾಕ್ಲೇಟ್ ತರಲು ರಸ್ತೆ ದಾಟುತ್ತಿದ್ದ ಮಹಿಳೆಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಕಲೇಶಪುರದ ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಜರುಗಿದೆ.
Advertisement
ಗುಲಾಬಿ ಮೃತ ಮಹಿಳೆ. ಮಹಿಳೆ ಡಿವೈಡರ್ ದಾಟಿ ರಸ್ತೆಗಿಳಿಯುತ್ತಿದ್ದಂತೆ ಇನ್ನೋವಾ ಕಾರು ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸುಮಾರು 10 ಅಡಿ ದೂರ ಹಾರಿ ಬಿದ್ದು ಮೃತಪಟ್ಟಿದ್ದಾಳೆ.
ಮಹಿಳೆಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ಕಾರನ್ನು ನಿಲ್ಲಿಸದೆ ಅಮಾನವೀಯ ವರ್ತನೆ ತೋರಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ನಂಬರ್ ಸಹ (ಕೆಎ-05-ಎಎಚ್-0576) ಪತ್ತೆಯಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.