ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತ ಪಟ್ಟಣದಲ್ಲಿ ಗುರುವಾರ ರೋಣ ಸಿಪಿಐ ಎಸ್.ಎಸ್. ಬೀಳಗಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಪಥ ಸಂಚಲ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
Advertisement
ಬಸ್ ನಿಲ್ದಾಣದಿಂದ ಪ್ರಾರಂಭವಾದ ಪಥ ಸಂಚಲನ ಜಕ್ಕಲಿ ಕ್ರಾಸ್, ಹಳೆ ಬಸ್ ನಿಲ್ದಾಣ, ಸಂತೆ ಬಜಾರದ ಗಣೇಶ ದೇವಸ್ಥಾನ, ಗ್ರಾಮದೇವತಾ ದೇವಸ್ಥಾನ, ಪ.ಪಂ ಮೂಲಕ ಮರಳಿ ಬಸ್ ನಿಲ್ದಾಣಕ್ಕೆ ಆಗಮಿಸಿತು. ಪಿಎಸ್‌ಐ ಐಶ್ವರ್ಯ ನಾಗರಾಳ, ಎಎಸ್‌ಐ ಶೇಖರ ಹೊಸಳ್ಳಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು.