ಕಲಬುರಗಿ: ಕಲ್ಬುರ್ಗಿಯ ಹೃದಯಭಾಗವಾದ ಸರಾಫ್ ಬಜಾರ್‌ನಲ್ಲಿ, ಹಾಡಹಗಲೇ ನಡೆದ ದರೋಡೆ ಘಟನೆಯು ಇಡೀ ನಗರವನ್ನು ಬೆಚ್ಚಿ ಬೀಳಿಸಿದೆ. ಸಿನಿಮಾ ಶೈಲಿಯಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಮಾಲೀಕನಿಗೆ ಗನ್ ತೋರಿಸಿ ಸುಮಾರು ಎರಡೂವರೆ ಕೆಜಿ ಚಿನ್ನಾಭರಣವನ್ನು ಲೂಟಿ ಮಾಡಿದ್ದಾರೆ.
Advertisement
ಹೌದು ಮಧ್ಯಾಹ್ನ ಸುಮಾರು 12.30ರಿಂದ 1 ಗಂಟೆ ನಡುವೆ ನಾಲ್ವರು ಖದೀಮರು ನುಗ್ಗಿ ಸಿನಿಮಾ ಸ್ಟೈಲ್ ನಲ್ಲಿ ದರೋಡೆ ಮಾಡಿದ್ದಾರೆ. ಮುಖಕ್ಕೆ ಮಾಸ್ಕ್, ತಲೆಗೆ ಕ್ಯಾಪ್ ಹಾಕಿಕೊಂಡು ಬಂದ ಖದೀಮರು ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಬೆದರಿಸಿ 2-3 ಕೆ.ಜಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ.
ಈ ಘಟನೆ ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.