ಇಂದು ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 39ನೇ ವಸಂತಕ್ಕೆ ಕಾಲಿಟ್ಟ ಕೆಜಿಎಫ್ ಸ್ಟಾರ್ಗೆ ಕುಟುಂಬಸ್ಥರು, ಆಪ್ತರು, ಸಿನಿಸ್ನೇಹಿತರೂ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.
ಇನ್ನೂ ಗೋವಾದ ಬೀಚ್‌ನಲ್ಲಿ ಮಧ್ಯರಾತ್ರಿ ಯಶ್ ಬರ್ತ್‌ಡೇ ಸೆಲೆಬ್ರೆಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಾಕಿ ಭಾಯ್ ಬರ್ತ್‌ಡೇ ಸಂಭ್ರಮದ ಫೋಟೊಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.
ಈ ಮೊದಲೇ ಹುಟ್ಟುಹಬ್ಬದಂದು ಯಶ್ ಊರಿನಲ್ಲಿ ಇರುವುದಿಲ್ಲ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದರು. ಸಿನಿಮಾ ಕೆಲಸದ ಹಿನ್ನೆಲೆಯಲ್ಲಿ ಅಭಿಮಾನಿಗಳೊಂದಿಗೆ ಬರ್ತ್‌ಡೇ ಸೆಲೆಬ್ರೆಷನ್ ಮಾಡಿಕೊಳ್ಳುವುದಿಲ್ಲ ಎಂದೂ ಹೇಳಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಕುಟುಂಬ ಹಾಗೂ ಆಪ್ತರೊಂದಿಗೆ ಬರ್ತ್‌ಡೇ ಸೆಲೆಬ್ರೆಷನ್ ಮಾಡಿಕೊಂಡಿದ್ದಾರೆ.
ಯಶ್ ಹುಟ್ಟುಹಬ್ಬದಂದು ತಮ್ಮ ಅಭಿಮಾನಿಗಳಿಗೆ ‘ಟಾಕ್ಸಿಕ್’ ಸರ್ಪ್ರೈಸ್ ಕೊಡಲಿದ್ದು, ಅಭಿಮಾನಿಗಳು ಅದನ್ನು ಕಣ್ತುಂಬಿ ಕೊಳ್ಳುವುದಕ್ಕೆ ಎದುರು ನೋಡುತ್ತಿದ್ದಾರೆ. ಯಶ್ ನಟಿಸುತ್ತಿರುವ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ ‘ಟಾಕ್ಸಿಕ್’ ಫಸ್ಟ್ ಲುಕ್ ಅಥವಾ ಟೀಸರ್ ಇಂದು ರಿಲೀಸ್ ಆಗುವ ಸಾಧ್ಯತೆಯಿದೆ.