MI vs SRH, IPL 2025: ವಾಂಖೆಡೆಯಲ್ಲಿ ಯಾರೂ ಮಾಡದ ದಾಖಲೆ ಮಾಡಿದ ರೋಹಿತ್ ಶರ್ಮಾ..!

0
Spread the love

2025ರ ಐಪಿಎಲ್​ನ 33ನೇ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ 3 ಸಿಕ್ಸರ್ ಗಳನ್ನು ಬಾರಿಸುವ ಮೂಲಕ ಅಪರೂಪದ ಮೂರು ಸಾಧನೆಗಳನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.

Advertisement

ಹೌದು ಮೊಹಮ್ಮದ್ ಶಮಿ ಮತ್ತು ಪ್ಯಾಟ್ ಕಮ್ಮಿನ್ಸ್ ಓವರ್‌ಗಳಲ್ಲಿ ಚೆಂಡನ್ನು ಸಿಕ್ಸರ್‌ಗೆ ಅಟ್ಟಿದರು. ರೋಹಿತ್ ಕೇವಲ 16 ಎಸೆತಗಳಲ್ಲಿ 3 ಸಿಕ್ಸರ್‌ಗಳೊಂದಿಗೆ 26 ರನ್ ಚಚ್ಚಿದರು. ಈ ಸಿಕ್ಸರ್‌ಗಳೊಂದಿಗೆ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ದೊಡ್ಡ ದಾಖಲೆಯನ್ನು ಸೃಷ್ಟಿಸಿದ್ದಾರೆ.

ರೋಹಿತ್ ಶರ್ಮಾ ಈಗ ವಾಂಖೆಡೆ ಕ್ರೀಡಾಂಗಣದಲ್ಲಿ ಒಟ್ಟು 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಅವರು ವಾಂಖೆಡೆಯಲ್ಲಿ 100 ಐಪಿಎಲ್ ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟ್ಸ್‌ಮನ್ ವಾಂಖೆಡೆ ಕ್ರೀಡಾಂಗಣದಲ್ಲಿ 100 ಸಿಕ್ಸರ್‌ಗಳನ್ನು ಸಿಡಿಸಿಲ್ಲ. ಈ ಮೂಲಕ ರೋಹಿತ್ ಶರ್ಮಾ ಫಾರ್ಮ್​ಗೆ ಮರಳುವ ಸಣ್ಣ ಸೂಚನೆ ಕೊಟ್ಟಿದ್ದಾರೆ. ಹಿಟ್‌ಮ್ಯಾನ್ ಒಂದೇ ಸ್ಥಳದಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ರೋಹಿತ್ ಶರ್ಮಾಗೂ ಮೊದಲು, ಐಪಿಎಲ್‌ನಲ್ಲಿ ಒಂದೇ ಸ್ಥಳದಲ್ಲಿ 100 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಹೆಗ್ಗಳಿಕೆ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳಿಗೆ ಸಲ್ಲುತ್ತದೆ. ಕುತೂಹಲಕಾರಿ ಅಂಶ ಎಂದರೆ ಈ ಮೂವರು ಬ್ಯಾಟರ್​ಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಂದೇ ತಂಡದವರಾಗಿದ್ದಾರೆ. ಬೆಂಗಳೂರಿನ ಮೂವರು ಬ್ಯಾಟ್ಸ್‌ಮನ್‌ಗಳು ಚಿನ್ನಸ್ವಾಮಿ ಮೈದಾನದಲ್ಲಿ 100 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here