HomeCrime Newsಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

For Dai;y Updates Join Our whatsapp Group

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ ತಾಯಿಯೊಂದಿಗೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿತ್ತಗನೂರು ಯಲ್ಲಪ್ಪ ಗಾರ್ಡನ್‌ನಲ್ಲಿ ಸೆಪ್ಟೆಂಬರ್ 9ರಂದು ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಬಳಿಕ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪತ್ನಿ ನಾಟಕವಾಡಿದ್ದಾಳೆ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಮಾರು 20 ವರ್ಷಗಳ ಹಿಂದೆ ಮುಬಾರಕ್‌ ಎಂಬುವರನ್ನು ಶಹಿನಾ ಬಾನು ವಿವಾಹವಾಗಿದ್ದಳು. ಕಳೆದ ಎರಡು ವರ್ಷಗಳಿಂದ ಮುಬಾರಕ್‌ ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದರು ಎನ್ನಲಾಗಿದೆ. ಇದೇ ವೇಳೆ ದಂಪತಿಯ ಪುತ್ರಿಯೂ ಅನಾರೋಗ್ಯಕ್ಕೆ ಒಳಗಾಗಿದ್ದಳು. ಮಗಳನ್ನು ಗುಣಪಡಿಸುವುದಾಗಿ ಮನೆಗೆ ಬಂದಿದ್ದ ನಹೀಮ್‌ ಉದ್ದೀನ್‌ ಖುರೇಶಿ ಎಂಬಾತನೊಂದಿಗೆ ಶಹಿನಾ ಬಾನು ಸಲುಗೆ ಬೆಳೆಸಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಶಹಿನಾ ಬಾನು ಹಾಗೂ ನಹೀಮ್‌ ನಡುವೆ ಪ್ರೇಮ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಪತಿಯನ್ನು ನೋಡಿಕೊಳ್ಳುವ ವಿಚಾರದಲ್ಲಿ ಬೇಸತ್ತಿದ್ದ ಶಹಿನಾ ಬಾನುಗೆ ನಹೀಮ್‌ ಕೊಲೆ ಮಾಡುವ ಸಲಹೆ ನೀಡಿದ್ದ ಎನ್ನಲಾಗಿದೆ. ಅದರಂತೆ ಸೆಪ್ಟೆಂಬರ್ 9ರಂದು ರಾತ್ರಿ ಶಹಿನಾ ಬಾನು ತನ್ನ ತಾಯಿ ಹಸೀನ ಜಾನ್ ಜೊತೆ ಸೇರಿ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಳು ಎಂದು ಆರೋಪಿಸಲಾಗಿದೆ.

ಮುಬಾರಕ್‌ ಮಲಗಿದ್ದ ವೇಳೆ ಉಸಿರುಗಟ್ಟಿಸಿ ಹಾಗೂ ಖಾಸಗಿ ಭಾಗಕ್ಕೆ ಒದ್ದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಬಳಿಕ ಮುಬಾರಕ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಹಿನಾ ಬಾನು ಹಾಗೂ ಹಸೀನ ಜಾನ್ ಹೇಳಿಕೊಂಡಿದ್ದರು.

ಆದರೆ ಮುಬಾರಕ್‌ ಸಾವಿನ ಬಗ್ಗೆ ಸಂಬಂಧಿಕರಿಗೆ ಅನುಮಾನ ಮೂಡಿದ್ದು, ಪೊಲೀಸರಿಗೆ ದೂರು ನೀಡಿದ್ದರು. ಆವಲಹಳ್ಳಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದಾಗ ಮುಬಾರಕ್‌ ಉಸಿರುಗಟ್ಟಿ ಮೃತಪಟ್ಟಿರುವುದು ಹಾಗೂ ಕೆನ್ನೆ, ಮೂಗು, ಕುತ್ತಿಗೆ ಮತ್ತು ಖಾಸಗಿ ಭಾಗದಲ್ಲಿ ಗಾಯಗಳಾಗಿರುವುದು ಬೆಳಕಿಗೆ ಬಂದಿದೆ.

ಮರಣೋತ್ತರ ಪರೀಕ್ಷಾ ವರದಿ ಆಧರಿಸಿ ಪೊಲೀಸರು ಶಹಿನಾ ಬಾನು, ಆಕೆಯ ತಾಯಿ ಹಸೀನ ಜಾನ್ ಹಾಗೂ ನಹೀಮ್‌ ಉದ್ದೀನ್‌ ಖುರೇಶಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಹೊರಬಂದಿದೆ ಎನ್ನಲಾಗಿದ್ದು, ಮೂವರನ್ನೂ ಬಂಧಿಸಿರುವ ಆವಲಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img