• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ರೋಣ-ನರಗುಂದ ಸಂಪರ್ಕ ಕಡಿತ: ಬೆಣ್ಣೆಹಳ್ಳದ ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆ ವಹಿಸಲು ಸೂಚನೆ

Vijaya Sakshi News Desk by Vijaya Sakshi News Desk
June 12, 2025
in Gadag News
ರೋಣ-ನರಗುಂದ ಸಂಪರ್ಕ ಕಡಿತ: ಬೆಣ್ಣೆಹಳ್ಳದ ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆ ವಹಿಸಲು ಸೂಚನೆ
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಧಾರವಾಡ ಜಿಲ್ಲೆಯ ಕುಂದಗೋಳ, ನವಲಗುಂದ ಮತ್ತು ಜಿಲ್ಲೆಯ ನರಗುಂದ, ರೋಣ ಭಾಗದಲ್ಲಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದರಿಂದ ಬೆಣ್ಣೆಹಳ್ಳದ ಪ್ರವಾಹ ಭೀತಿ ಎದುರಾಗಿದೆ. ಗುರುವಾರ ತಡರಾತ್ರಿಯೇ ಯಾವಗಲ್ ಗ್ರಾಮದ ಬಳಿಯ ಸೇತುವೆ ಜಲಾವೃತವಾಗಿ, ರೋಣ-ನರಗುಂದ ಸಂಪರ್ಕ ಕಡಿತಗೊಂಡಿದೆ. ಬೆಣ್ಣೆಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿ, ಬೆಣ್ಣೆಹಳ್ಳದ ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.

ಮುಂಗಾರು ಪೂರ್ವದಲ್ಲಿ ಅಬ್ಬರಿಸಿ ಮರೆಯಾಗಿದ್ದ ಮಳೆ ಮತ್ತೊಮ್ಮೆ ಹೊಸ ಅವತಾರ ತಾಳಿ ಪ್ರತ್ಯಕ್ಷವಾಗಿದ್ದು, ಬುಧವಾರ ಹಾಗೂ ಗುರುವಾರ ಅಳತೆಮೀರಿ ಸುರಿದ ಮಳೆಯ ರೌದ್ರಾವತಾರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಬೆಟಗೇರಿಯ ಕೆಲ ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಬೆಟಗೇರಿ ಹಾಗೂ ಗಂಗಿಮಡಿಯ ಕೆಲ ತಗ್ಗಿನ ಪ್ರದೇಶಗಳಿಗೆ ನೀರು ನುಗ್ಗಿತ್ತಲದೇ ರಸ್ತೆಗಳು ಮಳೆ ನೀರಿನಲ್ಲಿ ಮುಳುಗಿದ್ದವು. ಅಲ್ಲದೆ, ರೋಣ, ನರಗುಂದ ಭಾಗದಲ್ಲಿಯೂ ಪ್ರವಾಹ ಭೀತಿ ಸೃಷ್ಟಿಯಾಗಿದ್ದರೆ, ಮುಂಡರಗಿ, ಗಜೇಂದ್ರಗಡ, ಶಿರಹಟ್ಟಿ ಭಾಗದಲ್ಲಿ ಜಿಟಿಜಿಟಿ ಮಳೆ ಜನರನ್ನು ಮುದುರಿಸಿದೆ.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕುಂದ್ರಳ್ಳಿ ಗ್ರಾಮದ 24 ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ರಾತ್ರಿಯಿಡೀ ಜನ ಮಳೆ ನೀರನ್ನು ಹೊರಹಾಕಲು ಹರಸಾಹಸಪಟ್ಟರು. ಮನೆಯಲ್ಲಿನ ದವಸ-ಧಾನ್ಯಗಳು ನೀರು ಪಾಲಾಗಿರುವ ಬಗ್ಗೆ ವರದಿಯಾಗಿದೆ. ತಹಸೀಲ್ದಾರ ವಾಸುದೇವ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಬುಧವಾರ ಸಂಜೆಯಿಂದ ಗುರುವಾರ ಬೆಳಗಿನ ಜಾವದವರೆಗೂ ಜಿಟಿಜಿಟಿ ಮಳೆಯಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಜೂನ್ 11ರಂದು ಬೆಳಗ್ಗೆ 8.30ರಿಂದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 559ರಷ್ಟು ಹೆಚ್ಚು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯ ಮುನ್ಸೂಚಯಿರುವುದರಿಂದ ಆರೆಂಜ್-ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತುರ್ತು ಸಭೆ ನಡೆಸಿ ವಿಪತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಳೆ ಸಂದರ್ಭದಲ್ಲಿ ನದಿ, ಹಳ್ಳದಲ್ಲಿ ಈಜಾಡುವುದು, ಬಟ್ಟೆ ಒಗೆಯುವುದು, ಜಾನುವಾರುಗಳನ್ನು ತೊಳೆಯುವುದನ್ನು ನಿಷೇಧಿಸಿದ್ದಾರೆ. ಗುಡುಗು-ಮಿಂಚು ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿ ನಿಲ್ಲಬೇಕು. ಅಪಾಯಕಾರಿ ಸೇತುವೆಯಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದ್ದಾರೆ.

ಮಳೆಯಿಂದ ಸಂಭವಿಸುವ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಹಾಯವಾಣಿ ತೆರೆದಿದ್ದು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರು 08372-239177 ಅಥವಾ 1077 ಸಂಖ್ಯೆಗೆ ಕರೆ ಮಾಡಿ ಮಾಹಿತಿ, ಸಹಾಯ ಪಡೆಯಬಹುದು.

Tags: benne hallaBreakingNewsKarnatakaVijayasakshivijayasakshinews
ShareSendShare
Previous Post

Air India Plane Crash: ವಿಮಾನ ದುರಂತ; ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್!

Next Post

ಬೆಣ್ಣೆಹಳ್ಳ ಹರಿವಿನ ಗ್ರಾಮಗಳಲ್ಲಿ ಕಟ್ಟೆಚ್ಚರ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬೆಣ್ಣೆಹಳ್ಳ ಹರಿವಿನ ಗ್ರಾಮಗಳಲ್ಲಿ ಕಟ್ಟೆಚ್ಚರ

ಬೆಣ್ಣೆಹಳ್ಳ ಹರಿವಿನ ಗ್ರಾಮಗಳಲ್ಲಿ ಕಟ್ಟೆಚ್ಚರ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಈರುಳ್ಳಿ ಲಾರಿ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಈರುಳ್ಳಿ ಲಾರಿ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

November 4, 2026
ಕಾಂಗ್ರೆಸ್‌’ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ: ನಿಖಿಲ್ ಕುಮಾರಸ್ವಾಮಿ!

ಗೃಹಲಕ್ಷ್ಮಿ ಯೋಜನೆಯ 2,600 ಕೋಟಿ ರೂ. ಹಣ ವರ್ಗಾವಣೆ ಆರೋಪ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

November 4, 2026
ಬಸ್ ನಿಲ್ದಾಣದಲ್ಲಿ ಗುಟ್ಕಾ ಜಗಿದು ಉಗುಳಿದ್ರೆ ದಂಡ: ಚಾಲಕ-ನಿರ್ವಾಹಕರಿಗೂ ಹೊಸ ರೂಲ್ಸ್

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಬಸ್ ಟಿಕೆಟ್ ದರ 9 ರೂ.ವರೆಗೆ ಹೆಚ್ಚಳ, ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ!

November 4, 2026
ಮಳೆ ಕೊರತೆ ಎಫೆಕ್ಟ್: ಕರ್ನಾಟಕದಲ್ಲಿ ಅಕ್ಕಿ, ಬೇಳೆ ಸೇರಿದಂತೆ ದಿನಸಿ ಬೆಲೆ ಏರಿಕೆ

Rice Price Hike: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್! ಕೆಜಿಗೆ 100 ರೂ. ಗಡಿ ದಾಟಿದ ಅಕ್ಕಿ ದರ

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಈರುಳ್ಳಿ ಲಾರಿ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಈರುಳ್ಳಿ ಲಾರಿ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

November 4, 2026
ಕಾಂಗ್ರೆಸ್‌’ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ: ನಿಖಿಲ್ ಕುಮಾರಸ್ವಾಮಿ!

ಗೃಹಲಕ್ಷ್ಮಿ ಯೋಜನೆಯ 2,600 ಕೋಟಿ ರೂ. ಹಣ ವರ್ಗಾವಣೆ ಆರೋಪ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper