ರಾಯಚೂರು:- ರಾಯಚೂರು ಗಂಜ್ ವೃತ್ತದ ಬಳಿ ಟೀ ಕುಡಿಯಲು ಅಂಗಡಿಗೆ ತೆರಳಿದ್ದಾಗ ಪಕ್ಕದ ಮನೆ ಛಾವಣಿ ಹಾಗೂ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
60 ವರ್ಷದ ಈಶಮ್ಮ ಮೃತ ವೃದ್ಧೆ. ಇವರು ಎಲ್‌ಬಿಎಸ್ ನಗರದ ನಿವಾಸಿ ಎನ್ನಲಾಗಿದೆ. ಮೃತ ಈಶಮ್ಮ ಟೀ ಕುಡಿಯಲು ಅಂಗಡಿಗೆ ತೆರಳಿದ್ದರು. ಈ ವೇಳೆ ಏಕಾಏಕಿ ಟೀ ಅಂಗಡಿಯ ಪಕ್ಕದ ಮನೆ ಛಾವಣಿ, ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಈಶಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



