ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ರಂಪಾಟದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಕಾರ್ಗೆ ಬೈಕ್ ಟಚ್ ಆದ ವಿಚಾರಕ್ಕೆ ಯುವತಿಯೊಬ್ಬಳು ಕಾರ್ ಚಾಲಕನಿಗೆ ನಡುರಸ್ತೆಯಲ್ಲೇ ಅವಾಚ್ಯ ಪದಗಳಿಂದ ನಿಂದಿಸಿರುವ ಘಟನೆ ನಡೆದಿದೆ.
ನಗರದ 8ನೇ ಮೈಲಿ ರಸ್ತೆಯಲ್ಲಿ ನಿನ್ನೆ ಈ ಘಟನೆ ನಡೆದಿದ್ದು, KA 06 HP 1149 ಸಂಖ್ಯೆಯ ಬೈಕ್ನಲ್ಲಿ ಬಂದಿದ್ದ ಯುವತಿ ಎಡಭಾಗಕ್ಕೆ ಟರ್ನ್ ಮಾಡುವ ವೇಳೆ ಕಾರ್ಗೆ ಟಚ್ ಮಾಡಿದ್ದಾರೆ ಎನ್ನಲಾಗಿದೆ. ಇಂಡಿಕೇಟರ್ ಹಾಕದೇ ಏಕಾಏಕಿ ಟರ್ನ್ ಮಾಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಪ್ರಶ್ನೆ ಮಾಡಿದ ಕಾರ್ ಚಾಲಕನಿಗೆ ಯುವತಿ ಆಕ್ರೋಶ ವ್ಯಕ್ತಪಡಿಸಿ ಅಶ್ಲೀಲ ಹಾಗೂ ಅವಾಚ್ಯ ಪದಗಳಿಂದ ಬೈದಿದ್ದಾರೆ. ನಡು ರಸ್ತೆಯಲ್ಲೇ ಕೆಟ್ಟ ಪದಗಳನ್ನು ಬಳಸಿ ಗದ್ದಲ ಸೃಷ್ಟಿಸಿದ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿವೆ ಎನ್ನಲಾಗಿದೆ.
ಇನ್ನೂ, ಘಟನೆ ವೇಳೆ ಯುವತಿ ಹೆಲ್ಮೆಟ್ ಧರಿಸದೇ ಸಂಚಾರ ನಿಯಮ ಉಲ್ಲಂಘಿಸಿರುವುದೂ ಕಂಡುಬಂದಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ.



