ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ 10ಕ್ಕೂ ಹೆಚ್ಚು ಪುಡಿ ರೌಡಿಗಳು ಪಾನ್ ಶಾಪ್ ಮೇಲೆ ದಾಳಿ ನಡೆಸಿ ದಾಂಧಲೆ ಮಾಡಿದ ಘಟನೆ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಡೆದಿದೆ.
ಬಷಿರ್ ಎಂಬುವರ ಮನೆ ಹಾಗೂ ಪಾನ್ ಶಾಪ್ಗೆ ನುಗ್ಗಿದ ಆರೋಪಿಗಳು ಮಚ್ಚು, ಲಾಂಗು ಸೇರಿದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಅಂಗಡಿಯಲ್ಲಿದ್ದ ಬಾಟಲ್ಗಳನ್ನು ಒಡೆದು ಪರಾರಿಯಾಗಿದ್ದಾರೆ.
ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.



